ಡಿಸೆಂಬರ್ 25ರಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ: 7 ರಾಜ್ಯಗಳನ್ನು ಸಂಚರಿಸುವ ರಥಯಾತ್ರೆಗೆ ಚಾಲನೆ
ಕರ್ನಾಟಕ ಹೈಕೋರ್ಟ್'ನ ನಿವೃತ್ತ ನ್ಯಾಯಮೂರ್ತಿ ಬಿ.ಎ.

ಮುಖ್ಯಾಂಶಗಳು
- •ಪಾಟೀಲ್, ರಾಜಾಜಿನಗರದ ಶಾಸಕ ಸುರೇಶ್ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ, ಭಾರತೀಯ ಕೇಂದ್ರ ವೈದ್ಯಕೀಯ ಮಂಡಳಿಯ ಡಾ.
- •ಧನ್ವಂತರಿ ಜ್ಯೋತಿಯಿಂದ ಸಮ್ಮೇಳನದ ಉದ್ಘಾಟನೆ: ದಕ್ಷಿಣ ಭಾರತದ 7 ರಾಜ್ಯಗಳನ್ನು ಸಂಚರಿಸಲಿರುವ 2 ರಥಗಳು ಎಲ್ಲೆಡೆ ಧನ್ವಂತರಿ ಜ್ಯೋತಿಯನ್ನು ಹೊತ್ತು ಸಾಗಲಿವೆ.
ಬೆಂಗಳೂರು:
ಕಜೆ ಆಯುರ್ವೇದಿಕ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ ಡಿಸೆಂಬರ್ 28 ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಆಯುರ್ವೇದ ಸಮ್ಮೇಳನದ ಜನಜಾಗೃತಿಗಾಗಿ ಏಳು ರಾಜ್ಯಗಳನ್ನು ಸಂಚರಿಸುವ ರಥಯಾತ್ರೆಗೆ ಚಾಲನೆ ನೀಡಲಾಯಿತು.
ಕರ್ನಾಟಕ ಹೈಕೋರ್ಟ್'ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್, ರಾಜಾಜಿನಗರದ ಶಾಸಕ ಸುರೇಶ್ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ, ಭಾರತೀಯ ಕೇಂದ್ರ ವೈದ್ಯಕೀಯ ಮಂಡಳಿಯ ಡಾ. ಜಯಪ್ರಕಾಶ್ ನಾರಾಯಣ್ ಹಾಗೂ ಸಮ್ಮೇಳನದ ರುವಾರಿಗಳಾದ ಹಿರಿಯ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆ ಮುಂತಾದವರು ಮಲ್ಲೇಶ್ವರದ ಶ್ರೀಸಿದ್ದಿವಿನಾಯಕ ದೇವರ ಸನ್ನಿಧಿಯಲ್ಲಿ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿದರು.
ದ್ವಿತೀಯ ವಿಶ್ವ ಆಯುರ್ವೇದ ಸಮ್ಮೇಳನ ಹಾಗೂ ಆಯುರ್ವೇದ ಪದ್ಧತಿಯ ಕುರಿತಾಗಿ ಈ ರಥವು ಜನಜಾಗೃತಿಯನ್ನು ಮೂಡಿಸಲಿದ್ದು, ಕರ್ನಾಟಕದ ಎಲ್ಲಾ ಆಯುರ್ವೇದ ಕಾಲೇಜುಗಳು ಹಾಗೂ ಗೋವಾ, ಕೇರಳ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ, ತಮಿಳುನಾಡು 30ಕ್ಕೂ ಅಧಿಕ ಆಯುರ್ವೇದ ಕಾಲೇಜು ಸೇರಿದಂತೆ ಒಟ್ಟು 137 ಆಯುರ್ವೇದ ವಿದ್ಯಾಲಯಗಳನ್ನು ಒಟ್ಟು ಎರಡು ರಥಗಳು ಸಂಚರಿಸಲಿವೆ.
ಧನ್ವಂತರಿ ಜ್ಯೋತಿಯಿಂದ ಸಮ್ಮೇಳನದ ಉದ್ಘಾಟನೆ:
ದಕ್ಷಿಣ ಭಾರತದ 7 ರಾಜ್ಯಗಳನ್ನು ಸಂಚರಿಸಲಿರುವ 2 ರಥಗಳು ಎಲ್ಲೆಡೆ ಧನ್ವಂತರಿ ಜ್ಯೋತಿಯನ್ನು ಹೊತ್ತು ಸಾಗಲಿವೆ. ಆನಂತರ ಅದೇ ಧನ್ವಂತರಿ ಜ್ಯೋತಿಯ ಮೂಲಕ ವಿಶ್ವ ಸಮ್ಮೇಳನದ ಭವ್ಯ ಉದ್ಘಾಟನೆ ನೆರವೇರಲಿದೆ.
📢 ಸಂಪಾದಕೀಯ ತಿದ್ದುಪಡಿ ಮತ್ತು ಸ್ಪಷ್ಟೀಕರಣ:
ಈ ಸುದ್ದಿಯಲ್ಲಿ ತಪ್ಪು ಕಂಡುಬಂದರೆ ನಮ್ಮ ಸಂಪಾದಕೀಯ ತಂಡಕ್ಕೆ ತಿಳಿಸಿ, ನಾವು ಸರಿಪಡಿಸುತ್ತೇವೆ. ಇಮೇಲ್ ಮಾಡಿ: news@sirwar360.in ಅಥವಾ ಕರೆ ಮಾಡಿ: +91 94480 36036.
ಸಂಬಂಧಿತ ಸುದ್ದಿಗಳು
Bengaluruಅಕ್ಷರನಾದದ ಪುಸ್ತಕ ಹಬ್ಬದಲ್ಲಿ ಹಿರಿ-ಕಿರಿಯ ಸಾಹಿತಿಗಳ ಪುಸ್ತಕ ಬಿಡುಗಡೆ
ಬೆಂಗಳೂರು: ಅಕ್ಷರನಾದ ಪಬ್ಲಿಕೇಶನ್ಸ್ ಬೆಂಗಳೂರು ಇವರು ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಿರಿ-ಕಿರಿಯ ಸಾಹಿತಿಗಳ ಪುಸ್ತಕಗಳು…
Bengaluruಸುಂದರವಾಗಿ ನಡೆಯಿತು ಅಕ್ಷರನಾದ ಬಳಗದ ವಾರ್ಷಿಕೋತ್ಸವ
ಬೆಂಗಳೂರು: ಅಕ್ಷರನಾದ ಬಳಗದ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಸಾರ್ಥಕವಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತ್ಯ ಲೋಕದ ಹಿರಿಯರು ಶ್ರೀಮತಿ…


